Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನಲ್ಲಿ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನಲ್ಲಿ

ಮನುಷ್ಯಕುಮಾರನ ಬರುವಿಕೆ

ಮತ್ತಾ 24:29–31 · ಮಾರ್ಕ 13:24–27 · ಲೂಕ 21:25–28

ಮತ್ತಾಯನು

ಮತ್ತಾ 24:29–31

29“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.

30ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.

31ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.

ಮಾರ್ಕನು

ಮಾರ್ಕ 13:24–27

24ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.

25ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’

26ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.

27ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”

ಲೂಕನು

ಲೂಕ 21:25–28

25“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.

26ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.

27ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.

28ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು