Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ಬಿತ್ತುವವನ ಸಾಮ್ಯ

ಮತ್ತಾ 13:1–9 · ಮಾರ್ಕ 4:1–9 · ಲೂಕ 8:4–8

ಮತ್ತಾಯನು

ಮತ್ತಾ 13:1–9

1ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.

2ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.

3ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.

4“ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.

5ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.

6ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.

7ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.

9ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.

ಮಾರ್ಕನು

ಮಾರ್ಕ 4:1–9

1ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.

2ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:

3“ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.

4ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.

5ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;

6ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.

7ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.

8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”

9ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.

ಲೂಕನು

ಲೂಕ 8:4–8

4ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,

5“ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.

6ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.

7ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.

8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು