Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಗಲಿಲಾಯದಲ್ಲಿ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಗಲಿಲಾಯದಲ್ಲಿ

ಯೇಸು ಬಿರುಗಾಳಿಯನ್ನು ಶಾಂತಗೊಳಿಸುತ್ತಾನೆ

ಮತ್ತಾ 8:23–27 · ಮಾರ್ಕ 4:35–41 · ಲೂಕ 8:22–25

ಮತ್ತಾಯನು

ಮತ್ತಾ 8:23–27

23ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

24ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.

25ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು.

26ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.

27ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.

ಮಾರ್ಕನು

ಮಾರ್ಕ 4:35–41

35ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.

36ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.

37ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.

38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.

39ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.

40ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು

41ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಲೂಕನು

ಲೂಕ 8:22–25

22ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.

23ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.

24ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.

25ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು