Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೇಸುವಿನ ಶ್ರಮೆಗಳು

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೇಸುವಿನ ಶ್ರಮೆಗಳು

ಕಡೆಯ ಭೋಜನ

ಮತ್ತಾ 26:26–29 · ಮಾರ್ಕ 14:22–25 · ಲೂಕ 22:14–20

ಮತ್ತಾಯನು

ಮತ್ತಾ 26:26–29

26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.

27ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,

28ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.

29ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.

ಮಾರ್ಕನು

ಮಾರ್ಕ 14:22–25

22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.

23ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.

24ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.

25ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.

ಲೂಕನು

ಲೂಕ 22:14–20

14ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.

15ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.

16ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.

17ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.

18ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.

19ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.

20ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು