ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನಲ್ಲಿ
ದೇವಾಲಯದ ನಾಶನದ ಮುಂತಿಳಿವಳಿಕೆ
ಮತ್ತಾ 24:1–2 · ಮಾರ್ಕ 13:1–2 · ಲೂಕ 21:5–6
ಮತ್ತಾ 24:1–21ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
2ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
ಮಾರ್ಕ 13:1–21ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.
2ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
ಲೂಕ 21:5–65ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,
6ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.