ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ
ಯೇಸು ತಂದೆಗೆ ಸ್ತೋತ್ರ ಸಲ್ಲಿಸುತ್ತಾನೆ
ಮತ್ತಾ 11:25–27 · ಲೂಕ 10:21–22
ಮತ್ತಾ 11:25–2725ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
26ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.
27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.
ಲೂಕ 10:21–2221ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
22ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.