ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನ ದಾರಿಯಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನ ದಾರಿಯಲ್ಲಿ
ಯೇಸು ತನ್ನ ಮರಣವನ್ನು ಮೂರನೆಯ ಸಾರಿ ಮುಂತಿಳಿಸುತ್ತಾನೆ
ಮತ್ತಾ 20:17–19 · ಮಾರ್ಕ 10:32–34 · ಲೂಕ 18:31–34
ಮತ್ತಾ 20:17–1917ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
18“ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
19ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
ಮಾರ್ಕ 10:32–3432ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
33ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.
34ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
ಲೂಕ 18:31–3431ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
32ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,
33ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
34ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.