ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ
ಪರಲೋಕದಲ್ಲಿ ಸಂಪತ್ತು
ಮತ್ತಾ 6:19–21 · ಲೂಕ 12:33–34
ಮತ್ತಾ 6:19–2119“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.
20ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,
21ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.
ಲೂಕ 12:33–3433ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
34ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.