Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ಮರ ಮತ್ತು ಅದರ ಫಲ

ಮತ್ತಾ 7:15–20 · ಲೂಕ 6:43–45

ಮತ್ತಾಯನು

ಮತ್ತಾ 7:15–20

15“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.

16ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?

17ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;

18ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.

19ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.

20ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.

ಲೂಕನು

ಲೂಕ 6:43–45

43ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.

44ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.

45ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು