ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಗಲಿಲಾಯದಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಗಲಿಲಾಯದಲ್ಲಿ
ಯೇಸುವಿನ ತಾಯಿ ಮತ್ತು ತಮ್ಮಂದಿರು
ಮತ್ತಾ 12:46–50 · ಮಾರ್ಕ 3:31–35 · ಲೂಕ 8:19–21
ಮತ್ತಾ 12:46–5046ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.
47ಆಗ ಒಬ್ಬನು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು.
48ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ
49ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು.
50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.
ಮಾರ್ಕ 3:31–3531ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
32ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು.
33ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,
34“ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
35ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.
ಲೂಕ 8:19–2119ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
20ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,
21ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.