Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ಬುದ್ಧಿವಂತ ಮತ್ತು ಬುದ್ಧಿಹೀನ ಕಟ್ಟುವವರು

ಮತ್ತಾ 7:24–27 · ಲೂಕ 6:46–49

ಮತ್ತಾಯನು

ಮತ್ತಾ 7:24–27

24“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.

25ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.

26ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.

27ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.

ಲೂಕನು

ಲೂಕ 6:46–49

46“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?

47ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.

48ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.

49ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು