10ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.
11ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.
12ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
13ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.
14“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
15ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.
16“ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.
17ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.