ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನಲ್ಲಿ
ವಿಧವೆಯ ಕಾಣಿಕೆ
ಮಾರ್ಕ 12:41–44 · ಲೂಕ 21:1–4
ಮಾರ್ಕ 12:41–4441ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
42ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.
43ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
44ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.
ಲೂಕ 21:1–41ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.
2ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ,
3“ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.
4ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.