ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ
ಮಾನಸಾಂತರಪಡದ ಊರುಗಳಿಗೆ ಅಯ್ಯೋ
ಮತ್ತಾ 11:20–24 · ಲೂಕ 10:13–15
ಮತ್ತಾ 11:20–2420ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
21ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.
22ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
23ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.
24ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.
ಲೂಕ 10:13–1513ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
14ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
15ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.