Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ಯೇಸುವನ್ನು ಹಿಂಬಾಲಿಸುವುದರ ಬೆಲೆ

ಮತ್ತಾ 8:18–22 · ಲೂಕ 9:57–62

ಮತ್ತಾಯನು

ಮತ್ತಾ 8:18–22

18ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.

19ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,

20ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.

21ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,

22ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು.

ಲೂಕನು

ಲೂಕ 9:57–62

57ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,

58ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.

59ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.

60ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.

61ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.

62ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು