Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಯೆಹೂದದ ಅರಸರು

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಯೆಹೂದದ ಅರಸರು

ಯೆಹೂದದ ಅರಸನಾದ ಅಹಜ್ಯ

2 ಅರಸು 8:25–29 · 2 ಪೂರ್ವ 22:1–6

2 ಅರಸುಗಳು

2 ಅರಸು 8:25–29

25ಅಹಾಬನ ಮಗನೂ, ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.

26ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.

27ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

28ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.

29ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನಿಗೆ ರಾಮದಲ್ಲಿ ಆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕಾಗಿ ಇಜ್ರೇಲಿಗೆ ಬಂದನು. ಹಜಾಯೇಲನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅಹಾಬನ ಮಗನಾದ ಯೋರಾಮನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

2 ಪೂರ್ವಕಾಲವೃತ್ತಾಂತ

2 ಪೂರ್ವ 22:1–6

1ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.

2ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.

3ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.

4ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.

5ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.

6ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು