ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಹಿಜ್ಕೀಯನಿಂದ ಯೋಷೀಯನವರೆಗೆ
ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಹಿಜ್ಕೀಯನಿಂದ ಯೋಷೀಯನವರೆಗೆ
ಯೆಹೂದದ ಅರಸನಾದ ಆಮೋನ
2 ಅರಸು 21:19–26 · 2 ಪೂರ್ವ 33:21–25
2 ಅರಸು 21:19–2619ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.
20ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
21ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.
22ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.
23ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.
24ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
25ಆಮೋನನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
26ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.
2 ಪೂರ್ವ 33:21–2521ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.
22ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
23ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
24ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.
25ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.