Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಯೆಹೂದದ ಅರಸರು

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಯೆಹೂದದ ಅರಸರು

ಆಸ ಮತ್ತು ಬಾಷ

1 ಅರಸು 15:16–22 · 2 ಪೂರ್ವ 16:1–6

1 ಅರಸುಗಳು

1 ಅರಸು 15:16–22

16ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು

17ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.

18ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.

19ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.

20ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.

21ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು.

22ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

2 ಪೂರ್ವಕಾಲವೃತ್ತಾಂತ

2 ಪೂರ್ವ 16:1–6

1ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.

2ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ

3ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.

4ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.

5ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.

6ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು