ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಯೆಹೂದದ ಅರಸರು
ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಯೆಹೂದದ ಅರಸರು
ಆಸನ ಮರಣ
1 ಅರಸು 15:23–24 · 2 ಪೂರ್ವ 16:11–14
1 ಅರಸು 15:23–2423ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.
24ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.
2 ಪೂರ್ವ 16:11–1411ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.
12ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
13ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು.
14ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.