ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೊಲೊಮೋನ
ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೊಲೊಮೋನ
ತಾಮ್ರದ ಸಮುದ್ರಪಾತ್ರೆ
1 ಅರಸು 7:23–26 · 2 ಪೂರ್ವ 4:2–5
1 ಅರಸು 7:23–2623ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.
24ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು.
25ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು.
26ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.
2 ಪೂರ್ವ 4:2–52ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
3ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.
4ಅದು ಹನ್ನೆರಡು ಎರಕದ ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ, ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಆ ಕಂಚಿನ ಕಡಲು ಪಾತ್ರೆ ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಭಾಗದಲ್ಲಿತ್ತು.
5ಕಡಲಿನ ಪಾತ್ರೆಯು ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲಪುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗ ನೀರು ಹಿಡಿಯುತ್ತಿತ್ತು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.