Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಹಿಜ್ಕೀಯನಿಂದ ಯೋಷೀಯನವರೆಗೆ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಹಿಜ್ಕೀಯನಿಂದ ಯೋಷೀಯನವರೆಗೆ

ಯೋಷೀಯನು ಒಡಂಬಡಿಕೆಯನ್ನು ನವೀಕರಿಸುತ್ತಾನೆ

2 ಅರಸು 23:1–3 · 2 ಪೂರ್ವ 34:29–32

2 ಅರಸುಗಳು

2 ಅರಸು 23:1–3

1ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.

2ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

3ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.

2 ಪೂರ್ವಕಾಲವೃತ್ತಾಂತ

2 ಪೂರ್ವ 34:29–32

29ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.

30ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

31ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.

32ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು