ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೌಲ ಮತ್ತು ದಾವೀದ
ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೌಲ ಮತ್ತು ದಾವೀದ
ದಾವೀದನ ಅಧಿಕಾರಿಗಳು
2 ಸಮು 8:15–18 · 1 ಪೂರ್ವ 18:14–17
2 ಸಮು 8:15–1815ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.
16ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.
17ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,
18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.
1 ಪೂರ್ವ 18:14–1714ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.
15ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.
16ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.
17ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.