Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೌಲ ಮತ್ತು ದಾವೀದ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೌಲ ಮತ್ತು ದಾವೀದ

ದಾವೀದನ ಜಯಗಳು

2 ಸಮು 8:1–14 · 1 ಪೂರ್ವ 18:1–13

2 ಸಮುವೇಲನು

2 ಸಮು 8:1–14

1ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

2ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.

3ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.

4ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.

5ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.

6ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

7ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.

8ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.

9ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.

10ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.

11ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,

12ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

13ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.

14ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.

1 ಪೂರ್ವಕಾಲವೃತ್ತಾಂತ

1 ಪೂರ್ವ 18:1–13

1ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.

2ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.

3ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.

4ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.

5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.

6ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.

7ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.

8ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.

9ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.

10ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.

11ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

12ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.

13ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು