Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೌಲ ಮತ್ತು ದಾವೀದ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೌಲ ಮತ್ತು ದಾವೀದ

ಫಿಲಿಷ್ಟಿಯರ ದೈತ್ಯ ಯೋಧರು

2 ಸಮು 21:18–22 · 1 ಪೂರ್ವ 20:4–8

2 ಸಮುವೇಲನು

2 ಸಮು 21:18–22

18ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.

19ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.

20ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.

21ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.

22ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

1 ಪೂರ್ವಕಾಲವೃತ್ತಾಂತ

1 ಪೂರ್ವ 20:4–8

4ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.

5ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.

6ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.

7ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.

8ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು