Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಹಿಜ್ಕೀಯನಿಂದ ಯೋಷೀಯನವರೆಗೆ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಹಿಜ್ಕೀಯನಿಂದ ಯೋಷೀಯನವರೆಗೆ

ಹಿಜ್ಕೀಯನ ಮರಣ

2 ಅರಸು 20:20–21 · 2 ಪೂರ್ವ 32:32–33

2 ಅರಸುಗಳು

2 ಅರಸು 20:20–21

20ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

21ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

2 ಪೂರ್ವಕಾಲವೃತ್ತಾಂತ

2 ಪೂರ್ವ 32:32–33

32ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.

33ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು