ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಹಿಜ್ಕೀಯನಿಂದ ಯೋಷೀಯನವರೆಗೆ
ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಹಿಜ್ಕೀಯನಿಂದ ಯೋಷೀಯನವರೆಗೆ
ಹಿಜ್ಕೀಯನು ಅರಸನಾಗುತ್ತಾನೆ
2 ಅರಸು 18:1–3 · 2 ಪೂರ್ವ 29:1–2
2 ಅರಸು 18:1–31ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.
2ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.
3ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
2 ಪೂರ್ವ 29:1–21ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.
2ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.