Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೌಲ ಮತ್ತು ದಾವೀದ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೌಲ ಮತ್ತು ದಾವೀದ

ಹೀರಾಮನು ದಾವೀದನಿಗೆ ಅರಮನೆ ಕಟ್ಟುತ್ತಾನೆ; ದಾವೀದನ ಮಕ್ಕಳು

2 ಸಮು 5:11–16 · 1 ಪೂರ್ವ 14:1–7

2 ಸಮುವೇಲನು

2 ಸಮು 5:11–16

11ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.

12ಇದರಿಂದ ದಾವೀದನು, “ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ” ಎಂದು ತಿಳಿದುಕೊಂಡನು.

13ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.

14ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,

15ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,

16ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್.

1 ಪೂರ್ವಕಾಲವೃತ್ತಾಂತ

1 ಪೂರ್ವ 14:1–7

1ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.

2ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.

3ದಾವೀದನು ಯೆರೂಸಲೇಮಿನಲ್ಲಿಯೂ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಗಂಡು ಹೆಣ್ಣು ಮಕ್ಕಳನ್ನು ಪಡೆದನು.

4ಅಲ್ಲಿ ಅವನಿಗೆ ಹುಟ್ಟಿದ ಗಂಡು ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,

5ಇಬ್ಹಾರ್, ಎಲೀಷೂವ, ಎಲ್ಪೆಲೆಟ್,

6ನೋಗಹ, ನೆಫೆಗ್, ಯಾಫೀಯ,

7ಎಲೀಷಾಮ್, ಬೇಲ್ಯಾದ ಮತ್ತು ಎಲೀಫೆಲೆಟ್.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು