Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಯೆರೂಸಲೇಮಿನ ಪತನ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಯೆರೂಸಲೇಮಿನ ಪತನ

ಯೆಹೂದದ ಅರಸನಾದ ಯೆಹೋವಾಹಾಜ

2 ಅರಸು 23:31–35 · 2 ಪೂರ್ವ 36:1–4

2 ಅರಸುಗಳು

2 ಅರಸು 23:31–35

31ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.

32ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

33ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.

34ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.

35ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.

2 ಪೂರ್ವಕಾಲವೃತ್ತಾಂತ

2 ಪೂರ್ವ 36:1–4

1ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.

2ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.

3ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.

4ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು