Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಯೆರೂಸಲೇಮಿನ ಪತನ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಯೆರೂಸಲೇಮಿನ ಪತನ

ಯೆಹೋಯಾಖೀನನ ಬಿಡುಗಡೆ

2 ಅರಸು 25:27–30 · ಯೆರೆ 52:31–34

2 ಅರಸುಗಳು

2 ಅರಸು 25:27–30

27ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.

28ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.

29ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.

30ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.

ಯೆರೆಮೀಯನು

ಯೆರೆ 52:31–34

31ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.

32ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.

33ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.

34ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು