23:36ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.
23:37ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
24:1ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
24:2ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.
24:3ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.
24:4ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.
24:5ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
24:6ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.
24:7ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.