Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಯೆಹೂದದ ಅರಸರು

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಯೆಹೂದದ ಅರಸರು

ಯೆಹೂದದ ಅರಸನಾದ ಯೆಹೋರಾಮ

2 ಅರಸು 8:16–24 · 2 ಪೂರ್ವ 21:5–10

2 ಅರಸುಗಳು

2 ಅರಸು 8:16–24

16ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.

17ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.

18ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

19ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.

20ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.

21ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

22ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.

23ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.

24ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.

2 ಪೂರ್ವಕಾಲವೃತ್ತಾಂತ

2 ಪೂರ್ವ 21:5–10

5ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.

6ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

7ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

8ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.

9ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು.ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.

10ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು