Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೊಲೊಮೋನ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೊಲೊಮೋನ

ಎರಡು ತಾಮ್ರದ ಕಂಬಗಳು

1 ಅರಸು 7:15–22 · 2 ಪೂರ್ವ 3:15–17

1 ಅರಸುಗಳು

1 ಅರಸು 7:15–22

15ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.

16ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,

17ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು.

18ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.

19ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು.

20ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.

21ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.

22ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.

2 ಪೂರ್ವಕಾಲವೃತ್ತಾಂತ

2 ಪೂರ್ವ 3:15–17

15ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.

16ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.

17ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು