ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಯೆಹೂದದ ಅರಸರು
ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಯೆಹೂದದ ಅರಸರು
ಶೆಮಾಯನು ಯುದ್ಧವನ್ನು ತಡೆಯುತ್ತಾನೆ
1 ಅರಸು 12:21–24 · 2 ಪೂರ್ವ 11:1–4
1 ಅರಸು 12:21–2421ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
22ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.
23“ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ
24‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.
2 ಪೂರ್ವ 11:1–41ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
2ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ,
3“ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,
4ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.