Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಯೆಹೂದದ ಅರಸರು

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಯೆಹೂದದ ಅರಸರು

ಶೀಶಕನು ಯೆರೂಸಲೇಮಿನ ಮೇಲೆ ದಾಳಿ ಮಾಡುತ್ತಾನೆ

1 ಅರಸು 14:25–28 · 2 ಪೂರ್ವ 12:9–11

1 ಅರಸುಗಳು

1 ಅರಸು 14:25–28

25ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರುದ್ಧವಾಗಿ ದಂಡೆತ್ತಿ ಬಂದನು.

26ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.

27ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.

28ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.

2 ಪೂರ್ವಕಾಲವೃತ್ತಾಂತ

2 ಪೂರ್ವ 12:9–11

9ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.

10ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.

11ಅರಸನು ಯೆಹೋವನ ಅಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ಹಿಂತಿರುಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಗಳಲ್ಲಿಡುವರು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು