Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೊಲೊಮೋನ

ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೊಲೊಮೋನ

ಸೊಲೊಮೋನನ ಮರಣ

1 ಅರಸು 11:41–43 · 2 ಪೂರ್ವ 9:29–31

1 ಅರಸುಗಳು

1 ಅರಸು 11:41–43

41ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ, ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.

42ಅವನು ಯೆರೂಸಲೇಮಿನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದ ನಂತರ,

43ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.

2 ಪೂರ್ವಕಾಲವೃತ್ತಾಂತ

2 ಪೂರ್ವ 9:29–31

29ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.

30ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು.

31ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು