ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೊಲೊಮೋನ
ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೊಲೊಮೋನ
ಸೊಲೊಮೋನನ ಕುದುರೆಗಳು ಮತ್ತು ಐಶ್ವರ್ಯ
1 ಅರಸು 10:26–29 · 2 ಪೂರ್ವ 1:14–17
1 ಅರಸು 10:26–2926ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.
27ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.
28ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.
29ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.
2 ಪೂರ್ವ 1:14–1714ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.
15ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.
16ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
17ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.