ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ › ಸೊಲೊಮೋನ
ಪಕ್ಕಪಕ್ಕದಲ್ಲಿ ಅರಸುಗಳು ಮತ್ತು ಪೂರ್ವಕಾಲವೃತ್ತಾಂತ · ಸೊಲೊಮೋನ
ದೇವಾಲಯದ ಕಟ್ಟಡ ಆರಂಭವಾಗುತ್ತದೆ
1 ಅರಸು 6:1–3 · 2 ಪೂರ್ವ 3:1–4
1 ಅರಸು 6:1–31ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.
2ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಮೂವತ್ತು ಮೊಳ.
3ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.
2 ಪೂರ್ವ 3:1–41ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.
2ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು.
3ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು.
4ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.