ಮುಖಪುಟ › ಸಭಾ ವರ್ಷದ ಹಬ್ಬಗಳು › ತಪಸ್ಸುಕಾಲ
ಸಭಾ ವರ್ಷದ ಹಬ್ಬಗಳು
ತಪಸ್ಸುಕಾಲ
ಈಸ್ಟರ್ಗೆ ಮುಂಚಿನ ನಲವತ್ತು ದಿನಗಳ ಉಪವಾಸ: ಪಾಶ್ಚಾತ್ಯ ಸಭೆಗಳಲ್ಲಿ ಬೂದಿ ಬುಧವಾರದಿಂದ, ಆರ್ಥೊಡಾಕ್ಸ್ ಸಭೆಯಲ್ಲಿ ಶುದ್ಧ ಸೋಮವಾರದಿಂದ. ಅರಣ್ಯದಲ್ಲಿ ಯೇಸುವಿನ ಉಪವಾಸ ಮತ್ತು ದಾನ, ಪ್ರಾರ್ಥನೆ ಹಾಗೂ ಉಪವಾಸದ ಕುರಿತು ಆತನ ಮಾತುಗಳು, ಪೂರ್ಣವಾಗಿ.
ದಿನಾಂಕಗಳು
| ವರ್ಷ | ಪಾಶ್ಚಾತ್ಯ ಸಭೆಗಳುಬೂದಿ ಬುಧವಾರ | ಆರ್ಥೊಡಾಕ್ಸ್ ಸಭೆಶುದ್ಧ ಸೋಮವಾರ |
|---|---|---|
| 2027 | 10 ಫೆಬ್ರವರಿ 2027ಬುಧವಾರ | 15 ಮಾರ್ಚ್ 2027ಸೋಮವಾರ |
| 2028 | 1 ಮಾರ್ಚ್ 2028ಬುಧವಾರ | 28 ಫೆಬ್ರವರಿ 2028ಸೋಮವಾರ |
| 2029 | 14 ಫೆಬ್ರವರಿ 2029ಬುಧವಾರ | 19 ಫೆಬ್ರವರಿ 2029ಸೋಮವಾರ |
| 2030 | 6 ಮಾರ್ಚ್ 2030ಬುಧವಾರ | 11 ಮಾರ್ಚ್ 2030ಸೋಮವಾರ |
| 2031 | 26 ಫೆಬ್ರವರಿ 2031ಬುಧವಾರ | 24 ಫೆಬ್ರವರಿ 2031ಸೋಮವಾರ |
ಒಂದು ದಿನಾಂಕವು ಆರ್ಥೊಡಾಕ್ಸ್ ಅಥವಾ ಕಥೋಲಿಕ ಪಂಚಾಂಗದಲ್ಲಿ ಆ ದಿನದ ವಾಚನಗಳನ್ನು ತೆರೆಯುತ್ತದೆ.
ಆರ್ಥೊಡಾಕ್ಸ್ ದಿನಾಂಕಗಳು ಜೂಲಿಯನ್ ಪಂಚಾಂಗದ ಪ್ರಕಾರ; ಅದನ್ನು ರಷ್ಯನ್, ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತ ಪಾಲಿಸುತ್ತವೆ: ಅವುಗಳ ನಿಗದಿತ ದಿನಾಂಕದ ಹಬ್ಬಗಳು ನಾಗರಿಕ ಪಂಚಾಂಗದಲ್ಲಿ 13 ದಿನಗಳ ನಂತರ ಬರುತ್ತವೆ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ ಮತ್ತು ಇತರರು) ಕ್ರಿಸ್ಮಸ್ ಅನ್ನು 25 ಡಿಸೆಂಬರ್ನಂದು ಆಚರಿಸುತ್ತವೆ; ಪಾಸ್ಕ ಮತ್ತು ಅದನ್ನು ಅವಲಂಬಿಸಿರುವ ದಿನಗಳನ್ನು ಹೆಚ್ಚುಕಡಿಮೆ ಎಲ್ಲಾ ಆರ್ಥೊಡಾಕ್ಸ್ ಸಭೆಗಳಲ್ಲಿ ಒಂದೇ ರೀತಿ ಎಣಿಸಲಾಗುತ್ತದೆ.
ಬೈಬಲ್ ವಾಕ್ಯಭಾಗಗಳು
ಯೋವೇಲನು
12ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.” 13ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು. 14ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು. 15ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ. 16ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ. 17ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”
ಮತ್ತಾಯನು
1ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು. 2ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು. 3ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು, 4ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು. 5ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ 6ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು. 7ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು. 8ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ, 9ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು. 10ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು. 11ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.
ಮತ್ತಾಯನು
1“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ. 2“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 3ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ. 4ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 5“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 6ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 16“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 17ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. 18ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು. 19“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. 20ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ, 21ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.
ಕಲೆಯಲ್ಲಿ
ಕ್ರಿಸ್ತನ ಶೋಧನೆಹುವಾನ್ ದೆ ಫ್ಲಾಂಡೆಸ್ · c. 1500/1504
ಕ್ರಿಸ್ತನ ಶೋಧನೆಲೂಕಾಸ್ ವಾನ್ ಲೇಡೆನ್ · 1518
ಆತ್ಮವು ಯೇಸುವನ್ನು ಎತ್ತರವಾದ ಬೆಟ್ಟದ ಮೇಲೆ ಒಯ್ಯುತ್ತದೆ (Jésus transporté par l'esprit sur une haute montagne)ಜೇಮ್ಸ್ ಟಿಸೊ · 1886–1894
ಯೇಸುವನ್ನು ದೇವಾಲಯದ ಗೋಪುರದ ಮೇಲೆ ಒಯ್ಯಲಾಗುತ್ತದೆ (Jésus porté sur le pinacle du Temple)ಜೇಮ್ಸ್ ಟಿಸೊ · 1886–1894
ದೇವದೂತರು ಯೇಸುವಿಗೆ ಉಪಚಾರ ಮಾಡುತ್ತಾರೆ (Jésus assisté par les anges)ಜೇಮ್ಸ್ ಟಿಸೊ · 1886–1894
ಇನ್ನಷ್ಟು ಹಬ್ಬಗಳು
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು