ಅನ್ವೇಷಿಸಿ › ಹಳೆಯ ನಕ್ಷೆಗಳು › ಸಂತ ಪೌಲನ ಪ್ರಯಾಣಗಳು
ನಕ್ಷೆಯನ್ನು ಪೂರ್ಣ ಗಾತ್ರದಲ್ಲಿ ತೆರೆಯಿರಿ (3000 × 2256)
ಹಳೆಯ ನಕ್ಷೆಗಳು · 1881
ಸಂತ ಪೌಲನ ಪ್ರಯಾಣಗಳು ನಕ್ಷೆಕಾರ: H.H. Hardesty (Firm) · ವರ್ಷ: 1881
1881ರಲ್ಲಿ ಶಿಕಾಗೋ ಮತ್ತು ಟೊಲೀಡೊದಲ್ಲಿ ಎಚ್. ಎಚ್. ಹಾರ್ಡೆಸ್ಟಿ ಪ್ರಕಟಿಸಿದ, ಸತ್ಯವೇದದ ನಕ್ಷೆಗಳ ಒಂದು ಸಂಖ್ಯೆ ಕೊಟ್ಟ ಸರಣಿಯನ್ನು ಒಳಗೊಂಡಿರುವ “ಐತಿಹಾಸಿಕ ಕೈ-ಅಟ್ಲಾಸ್”ನಿಂದ. ನಕ್ಷೆ ಸಂಖ್ಯೆ 12 ಪೌಲನ ಮೂರು ಸುವಾರ್ತಾಪ್ರಚಾರದ ಪ್ರಯಾಣಗಳಿಗೂ ರೋಮಾಪುರಕ್ಕೆ ಅವನ ಸಮುದ್ರಯಾನಕ್ಕೂ ಸಂಖ್ಯೆ ಕೊಡುತ್ತದೆ, ಪ್ರತಿಯೊಂದರ ಜೊತೆಗೆ ಅಪೊಸ್ತಲರ ಕೃತ್ಯಗಳ ಅಧ್ಯಾಯಗಳನ್ನು ಕೊಡುತ್ತದೆ, ಮತ್ತು 1881ರ ಒಂದು ಅಮೆರಿಕನ್ ಮಿಷನರಿ ಸಂಘದ ಮಿಷನ್ ಕೇಂದ್ರಗಳನ್ನೂ ಗುರುತಿಸುತ್ತದೆ.
Library of Congress ನಲ್ಲಿ ಈ ನಕ್ಷೆ
ವಾಕ್ಯಭಾಗಗಳು ಅ. ಕೃ 13:1–4 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ. ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು. ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು. ಅ. ಕೃ 16:9–12 ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು. ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು. ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು. ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು. ಅ. ಕೃ 27:1–2 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0 ; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು