ಅನ್ವೇಷಿಸಿ › ಹಳೆಯ ನಕ್ಷೆಗಳು › ಪವಿತ್ರ ನಾಡು, ಟೋಬಿಯಾಸ್ ಕೊನ್ರಾಡ್ ಲೊಟ್ಟರ್
ನಕ್ಷೆಯನ್ನು ಪೂರ್ಣ ಗಾತ್ರದಲ್ಲಿ ತೆರೆಯಿರಿ (3000 × 2530)
ಹಳೆಯ ನಕ್ಷೆಗಳು · 1759
ಪವಿತ್ರ ನಾಡು, ಟೋಬಿಯಾಸ್ ಕೊನ್ರಾಡ್ ಲೊಟ್ಟರ್ ನಕ್ಷೆಕಾರ: Lotter, Tobias Conrad · ವರ್ಷ: 1759
ಮ್ಯಾಥೇಯುಸ್ ಸೊಯ್ಟರ್ನ ಅಳಿಯನೂ ಉತ್ತರಾಧಿಕಾರಿಯೂ ಆದ ಟೋಬಿಯಾಸ್ ಕೊನ್ರಾಡ್ ಲೊಟ್ಟರ್ 1759ರಲ್ಲಿ ಆಗ್ಸ್ಬರ್ಗ್ನಲ್ಲಿ ಪ್ರಕಟಿಸಿದ್ದು. ಇದು ಹನ್ನೆರಡು ಕುಲಗಳಾಗಿ ವಿಭಾಗಿಸಿದ ಯೆಹೂದ ಮತ್ತು ಇಸ್ರಾಯೇಲ್ ಎಂಬ ಹಳೆಯ ರಾಜ್ಯಗಳನ್ನು ತೋರಿಸುತ್ತದೆ; ಕೆಳಗೆ ಬಲಭಾಗದ ಚಿಕ್ಕ ಒಳನಕ್ಷೆಯು ಐಗುಪ್ತದಿಂದ ಕಾನಾನಿನವರೆಗಿನ ನಲವತ್ತು ವರ್ಷಗಳ ಅಲೆದಾಟವನ್ನು ಒಂದೊಂದು ತಂಗುದಾಣವಾಗಿ ತೋರಿಸುತ್ತದೆ. ಅಲಂಕಾರಿಕ ಚೌಕಟ್ಟಿನಲ್ಲಿ ಧರ್ಮಶಾಸ್ತ್ರದ ಹಲಗೆಗಳನ್ನೂ ದೀಪಸ್ತಂಭವನ್ನೂ ಹಿಡಿದ ಒಬ್ಬ ಮಹಾಯಾಜಕನು ನಿಂತಿದ್ದಾನೆ.
Library of Congress ನಲ್ಲಿ ಈ ನಕ್ಷೆ
ವಾಕ್ಯಭಾಗಗಳು 1 ಅರಸು 12:19–20 ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ. ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ. ಅರಣ್ಯ 33:1–49 ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ: ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು. ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು. ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು. ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು. ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು. ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು. ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು. ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು. ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು. ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು. ಸೀನ್ ಮರುಭೂಮಿಯಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು. ದೊಪ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು. ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ. ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು. ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು. ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು. ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು. ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು. ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು. ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು. ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು. ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು. ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು. ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು. ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು. ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು. ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು. ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು. ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು. ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು. ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು. ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು. ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು. ಅಬ್ರೋನದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು. ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು. ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು. ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು. ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು. ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು. ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು. ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು. ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು. ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು. ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು. ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0 ; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು