ಅನ್ವೇಷಿಸಿ › ಹಳೆಯ ನಕ್ಷೆಗಳು › ಸೊಲೊಮೋನನ ಪ್ರಾಂತ್ಯಗಳು
ನಕ್ಷೆಯನ್ನು ಪೂರ್ಣ ಗಾತ್ರದಲ್ಲಿ ತೆರೆಯಿರಿ (2530 × 3000)
ಹಳೆಯ ನಕ್ಷೆಗಳು · 1826
ಸೊಲೊಮೋನನ ಪ್ರಾಂತ್ಯಗಳು ನಕ್ಷೆಕಾರ: Tanner, Henry Schenck · ವರ್ಷ: 1826
1826ರಲ್ಲಿ ಫಿಲಡೆಲ್ಫಿಯಾದಲ್ಲಿ “ಪವಿತ್ರ ಮತ್ತು ಲೌಕಿಕ ಎರಡೂ ಬಗೆಯ ಪ್ರಾಚೀನ ಲೇಖಕರ ಬರಹಗಳನ್ನು ವಿವರಿಸಲು” ಹೆನ್ರಿ ಎಸ್. ಟ್ಯಾನರ್ ಪ್ರಕಟಿಸಿದ “ಪ್ರಾಚೀನ ಭೂಗೋಳದ ಅಟ್ಲಾಸ್”ನಿಂದ. ಈ ಪಟವು ಹನ್ನೆರಡು ಪ್ರಾಂತ್ಯಗಳನ್ನು ತೋರಿಸುತ್ತದೆ; ಅವುಗಳ ಅಧಿಕಾರಿಗಳು ಪ್ರತಿಯೊಬ್ಬರೂ ವರ್ಷದಲ್ಲಿ ಒಂದು ತಿಂಗಳು ಸೊಲೊಮೋನನ ಮನೆಗೆ ಬೇಕಾದದ್ದನ್ನು ಒದಗಿಸುತ್ತಿದ್ದರು; ಪ್ರಾಂತ್ಯಗಳಿಗೆ ಅರಸುಗಳ ಮೊದಲನೆಯ ಪುಸ್ತಕದ 4ನೆಯ ಅಧ್ಯಾಯದಲ್ಲಿನ ಅಧಿಕಾರಿಗಳ ಹೆಸರುಗಳನ್ನು ಇಡಲಾಗಿದೆ: ಹೂರನ ಮಗ, ದೆಕೆರನ ಮಗ, ಬಾಣಾ, ಗೆಬೆರ್ ಮತ್ತು ಇತರರು.
Library of Congress ನಲ್ಲಿ ಈ ನಕ್ಷೆ
ವಾಕ್ಯಭಾಗಗಳು 1 ಅರಸು 4:7–19 ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು. ಅವರು ಯಾರಾರೆಂದರೆ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿದ್ದ ಹೂರನ ಮಗ, ಮಾಕಾಚ್, ಶಾಲ್ಬೀಮ್, ಬೇತ್ಷೆಮೆಷ್, ಏಲೋನ್ ಬೇತ್ ಹಾನಾನ್ ಎಂಬ ಊರುಗಳ ಒಡೆಯನಾದ ದೆಕೆರನ ಮಗನು. ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗ, ಅವನು ಸೋಕೋ ಮತ್ತು ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದನು. ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು. ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು. ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು. ಮಹನಯಿಮಿನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು. ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು. ಅಶೇರಿಗೂ ಮತ್ತು ಆಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು, ಇಸ್ಸಾಕಾರ್ ಪ್ರಾಂತ್ಯದಲ್ಲಿದ್ದ ಫಾರೂಹನ ಮಗನಾದ ಯೆಹೋಷಾಫಾಟನು, ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ, ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0 ; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು