Bible Explorer ಆ್ಯಪ್ ಪಡೆಯಿರಿ

ಮುಖಪುಟ › ಸಭಾ ವರ್ಷದ ಹಬ್ಬಗಳು › ಪೆಂತೆಕೊಸ್ತ

ಸಭಾ ವರ್ಷದ ಹಬ್ಬಗಳು

ಪೆಂತೆಕೊಸ್ತ

ಈಸ್ಟರ್ ನಂತರ ಐವತ್ತು ದಿನಗಳಿಗೆ: ಯೆರೂಸಲೇಮಿನಲ್ಲಿ ಶಿಷ್ಯರ ಮೇಲೆ ಪವಿತ್ರಾತ್ಮನ ಆಗಮನ, ಅಪೊಸ್ತಲರ ಕೃತ್ಯಗಳು ಹೇಳುವಂತೆ, ಪೇತ್ರನು ಉಲ್ಲೇಖಿಸುವ ಯೋವೇಲನ ಪ್ರವಾದನೆ ಮತ್ತು ಯೋಹಾನನ ಸುವಾರ್ತೆಯಲ್ಲಿರುವ ಯೇಸುವಿನ ಮಾತುಗಳೊಂದಿಗೆ.

ದಿನಾಂಕಗಳು

ವರ್ಷಪಾಶ್ಚಾತ್ಯ ಸಭೆಗಳುಪಂಚಾಶತ್ತಮಆರ್ಥೊಡಾಕ್ಸ್ ಸಭೆಪಂಚಾಶತ್ತಮ
202716 ಮೇ 2027ಭಾನುವಾರ20 ಜೂನ್ 2027ಭಾನುವಾರ
20284 ಜೂನ್ 2028ಭಾನುವಾರ4 ಜೂನ್ 2028ಭಾನುವಾರ
202920 ಮೇ 2029ಭಾನುವಾರ27 ಮೇ 2029ಭಾನುವಾರ
20309 ಜೂನ್ 2030ಭಾನುವಾರ16 ಜೂನ್ 2030ಭಾನುವಾರ
20311 ಜೂನ್ 2031ಭಾನುವಾರ1 ಜೂನ್ 2031ಭಾನುವಾರ

ಒಂದು ದಿನಾಂಕವು ಆರ್ಥೊಡಾಕ್ಸ್ ಅಥವಾ ಕಥೋಲಿಕ ಪಂಚಾಂಗದಲ್ಲಿ ಆ ದಿನದ ವಾಚನಗಳನ್ನು ತೆರೆಯುತ್ತದೆ.

ಆರ್ಥೊಡಾಕ್ಸ್ ದಿನಾಂಕಗಳು ಜೂಲಿಯನ್ ಪಂಚಾಂಗದ ಪ್ರಕಾರ; ಅದನ್ನು ರಷ್ಯನ್, ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತ ಪಾಲಿಸುತ್ತವೆ: ಅವುಗಳ ನಿಗದಿತ ದಿನಾಂಕದ ಹಬ್ಬಗಳು ನಾಗರಿಕ ಪಂಚಾಂಗದಲ್ಲಿ 13 ದಿನಗಳ ನಂತರ ಬರುತ್ತವೆ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ ಮತ್ತು ಇತರರು) ಕ್ರಿಸ್ಮಸ್ ಅನ್ನು 25 ಡಿಸೆಂಬರ್‌ನಂದು ಆಚರಿಸುತ್ತವೆ; ಪಾಸ್ಕ ಮತ್ತು ಅದನ್ನು ಅವಲಂಬಿಸಿರುವ ದಿನಗಳನ್ನು ಹೆಚ್ಚುಕಡಿಮೆ ಎಲ್ಲಾ ಆರ್ಥೊಡಾಕ್ಸ್ ಸಭೆಗಳಲ್ಲಿ ಒಂದೇ ರೀತಿ ಎಣಿಸಲಾಗುತ್ತದೆ.

ಬೈಬಲ್ ವಾಕ್ಯಭಾಗಗಳು

ಅಪೊಸ್ತಲರ ಕೃತ್ಯಗಳು

ಅ. ಕೃ 2:1–21

1ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು. 2ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. 3ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು. 4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು. 5ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು. 6ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು. 7ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ. 8ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ? 9ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, 10ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ 11ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು. 12ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?” 13ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು. 14ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ. 15ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ. 16ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ, 17“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು; 18ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು. 19ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. 21ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.

ಯೋವೇಲನು

ಯೋವೇ 2:28–32

28ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು. 29ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು. 30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು. 31ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. 32ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”

ಯೋಹಾನನು

ಯೋಹಾ 7:37–39

37ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. 38ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು. 39ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.

ಯೋಹಾನನು

ಯೋಹಾ 20:19–23

19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. 20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. 22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.

ಕಲೆಯಲ್ಲಿ

ಎಲ್ಲಾ ಕೃತಿಗಳು

ಇನ್ನಷ್ಟು ಹಬ್ಬಗಳು

ಸಭಾ ವರ್ಷದ ಹಬ್ಬಗಳು

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು