Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 1 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಅಕ್ಟೋಬರ್ 2026

ಗುರುವಾರ · ಸಾಮಾನ್ಯ ಕಾಲದ 26ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 26ನೇ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಬಾಲ ಯೇಸುವಿನ ಸಂತ ತೆರೇಸಾ, ಕನ್ಯೆ ಮತ್ತು ಧರ್ಮಸಭೆಯ ಪಂಡಿತೆ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಯೋಬ 19:21–27

21ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ. 22ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ? 23ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು! 24ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ! 25ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು. 26ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು. 27ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.

ಪ್ರತಿವಚನ ಕೀರ್ತನೆ

ಕೀರ್ತ 27:7–9, 13–14

7ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. 8“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. 9ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. 13ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. 14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.

ಸುವಾರ್ತೆ

ಲೂಕ 10:1–12

1ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. 2ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ. 3ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. 4ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ. 5ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ. 6ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು. 7ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ. 8ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ. 9ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ. 10ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು, 11‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ. 12ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು