ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 1 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 18 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 1 ಅಕ್ಟೋಬರ್ 2026
ಗುರುವಾರ · ಪಂಚಾಶತ್ತಮದ ನಂತರದ 18ನೇ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Afterfeast of the Exaltation of the Cross
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
33ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು. 6:1ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. 2ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, 3ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.” 4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ. 5ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ. 6ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. 7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. 8ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ. 9ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
ಸುವಾರ್ತೆ
13ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು. 14ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು. 15“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ) 16ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; 17ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ, 18ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ. 19ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ. 20ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ. 21ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. 22ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು. 23ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ. 24ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. 25ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ. 26ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ. 27ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು. 28ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 1 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು