Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 2 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 2 ಅಕ್ಟೋಬರ್ 2026

ಶುಕ್ರವಾರ · ಸಾಮಾನ್ಯ ಕಾಲದ 26ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 26ನೇ ವಾರದ ಶುಕ್ರವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಪವಿತ್ರ ರಕ್ಷಕ ದೇವದೂತರು · ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಯೋಬ 38:1, 12–21; 40:3–4

1ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು, 12ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ? 13ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ? 14ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ. ಎಲ್ಲಾ ವಸ್ತುಗಳು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುವವು. 15ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು. 16ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ? 17ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ? 18ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು. 19ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ? 20ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ? 21ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು! 40:3ಆಗ ಯೋಬನು ಯೆಹೋವನಿಗೆ ಉತ್ತರವಾಗಿ, 4“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.

ಪ್ರತಿವಚನ ಕೀರ್ತನೆ

ಕೀರ್ತ 139:1–3, 7–10, 13–14

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ; 2ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ. 3ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. 7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ? 8ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. 9ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ, 10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು. 13ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? 14ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.

ಸುವಾರ್ತೆ

ಮತ್ತಾ 18:1–5, 10

1ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು. 2ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, 3ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 4ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. 5ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ. 10ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು