Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 2 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 19 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಅಕ್ಟೋಬರ್ 2026

ಶುಕ್ರವಾರ · ಪಂಚಾಶತ್ತಮದ ನಂತರದ 18ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Afterfeast of the Exaltation of the Cross

ಉಪವಾಸದ ದಿನ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಎಫೆ 6:18–24

18ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. 19ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. 20ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ. 21ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು. 22ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. 23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ. 24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.

ಸುವಾರ್ತೆ

ಮತ್ತಾ 24:27–33, 42–51

27ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು. 28ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು. 29“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. 30ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. 31ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು. 32“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ. 33ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ. 42“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ. 43ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. 44ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. 45ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು? 46ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು. 47ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 48ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು 49ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ, 50ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ 51ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 2 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು