ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 3 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಅಕ್ಟೋಬರ್ 2026
ಶನಿವಾರ · ಸಾಮಾನ್ಯ ಕಾಲದ 26ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 26ನೇ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಆಗ ಯೋಬನು ಯೆಹೋವನಿಗೆ ಪ್ರತ್ಯುತ್ತರವಾಗಿ ಹೀಗೆಂದನು, 2“ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ. 3‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ. 5ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು. 6ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು. 12ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು. 13ಇಷ್ಟು ಮಾತ್ರವಲ್ಲದೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು. 14ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು. 15ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು. 16ಆ ಮೇಲೆ ಯೋಬನು ನೂರನಲ್ವತ್ತು ವರ್ಷ ಬಾಳಿ ತನ್ನ ಮಕ್ಕಳನ್ನು, ಮೊಮ್ಮಕ್ಕಳನ್ನು ಅಂತು ತನ್ನ ಸಂತಾನದ ನಾಲ್ಕು ತಲೆಗಳನ್ನು ಕಂಡನು. 17ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು.
ಪ್ರತಿವಚನ ಕೀರ್ತನೆ
ಕೀರ್ತ 119:66, 71, 75, 91, 125, 130
66ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು, ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ. 71ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು. 75ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ. 91ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ. 125ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು. 130ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
ಸುವಾರ್ತೆ
17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು. 18ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು. 19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ. 20ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. 21ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. 22ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು. 23ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. 24ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು