ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 3 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 20 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಅಕ್ಟೋಬರ್ 2026
ಶನಿವಾರ · ಪಂಚಾಶತ್ತಮದ ನಂತರದ 18ನೇ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
ಶಿಲುಬೆಯ ಉನ್ನತೀಕರಣದ ನಂತರದ ಶನಿವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ಶಿಲುಬೆಯ ಉನ್ನತೀಕರಣದ ನಂತರದ ಶನಿವಾರ)
26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ. 27ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು. 28ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. 29ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
ಪತ್ರಿಕೆ
39ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ. 40ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ. 41ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು. 42ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು. 43ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; 44ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ. 45“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.
ಸುವಾರ್ತೆ (ಶಿಲುಬೆಯ ಉನ್ನತೀಕರಣದ ನಂತರದ ಶನಿವಾರ)
21ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು. 22ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು. 23ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ. 24ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು. 25ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇ ನಾನು ನಿಮಗೆ ಹೇಳಿದಂಥದ್ದೇ. 26ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು. 27ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ. 28ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ. 29ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು. 30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
ಸುವಾರ್ತೆ
3ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು, 4ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, 5‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ 6ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು. 7ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು. 8ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು. 9ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು. 10ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು. 11ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು. 12ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 3 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು