Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 5 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ಅಕ್ಟೋಬರ್ 2026

ಸೋಮವಾರ · ಸಾಮಾನ್ಯ ಕಾಲದ 27ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 27ನೇ ವಾರದ ಸೋಮವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಫೌಸ್ಟೀನಾ ಕೊವಾಲ್ಸ್ಕಾ, ಕನ್ಯೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಗಲಾ 1:6–12

6ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. 7ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. 8ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. 9ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು. 10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ. 11ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ. 12ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.

ಪ್ರತಿವಚನ ಕೀರ್ತನೆ

ಕೀರ್ತ 111:1–2, 7–10

1ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. 2ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. 7ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. 8ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. 9ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. 10ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ಸುವಾರ್ತೆ

ಲೂಕ 10:25–37

25ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, 26ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು. 27ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು. 28ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು. 29ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು, 30ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು. 31ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು. 32ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು. 33ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ, 34ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. 35ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು. 36ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ, 37ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು