Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2026 › 6 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ಅಕ್ಟೋಬರ್ 2026

ಮಂಗಳವಾರ · ಸಾಮಾನ್ಯ ಕಾಲದ 27ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 27ನೇ ವಾರದ ಮಂಗಳವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಬ್ರೂನೊ, ಧರ್ಮಗುರು · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಗಲಾ 1:13–24

13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. 14ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು. 15ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು, 16ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ, 17ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು. 18ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು. 19ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. 20ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ. 21ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು. 22ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ. 23“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ, 24ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.

ಪ್ರತಿವಚನ ಕೀರ್ತನೆ

ಕೀರ್ತ 139:1–3, 13–15

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ; 2ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ. 3ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. 13ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? 14ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ. 15ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.

ಸುವಾರ್ತೆ

ಲೂಕ 10:38–42

38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ A, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು